Connect with us

    BELTHANGADI

    ಬೆಳ್ತಂಗಡಿ – ಪತಿಯನ್ನು ಕಡಿದು ಕೊಲೆ ಮಾಡಿದ ಪತ್ನಿ

    ಬೆಳ್ತಂಗಡಿ ಜುಲೈ 05: ಪತ್ನಿಯೇ ಪತಿಯನ್ನು ಕಡಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಅಬ್ಬನ್ ಕೆರೆ ನಿವಾಸಿ ಬೇಬಿ ಎಂದು ಗುರುತಿಸಲಾಗಿದ್ದು, ಪತ್ನಿ ನೆಲ್ಲಮ್ಮ ನೆ ತನ್ನ ಗಂಡನನ್ನು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.


    ಕೃಷಿ ಮಾಡಿಕೊಂಡಿರುವ ಬೇಬಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮನೆಯಲ್ಲಿ ದಂಪತಿ ಇಬ್ಬರೇ ವಾಸವಾಗಿದ್ದಾರೆ ಎಂದು ತಿಳಿದು ಬಂದಿದೆ,. ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು, ಯಾವ ಕಾರಣಕ್ಕೆ ಪತಿಯನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply