DAKSHINA KANNADA
ಸುಳ್ಯ – ಕಾಡಾನೆ ದಾಳಿಗೆ ಗಂಭೀರವಾಗಿ ಗಾಯಗೊಂಡ ಅಯ್ಯಪ್ಪ ವೃತಾಧಾರಿ
ಸುಳ್ಯ ಡಿಸೆಂಬರ್ 17: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದ ಕಲ್ಮಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಚರಿತ್ ಎಂದು ಗುರುತಿಸಲಾಗಿದೆ. ರಸ್ತೆ ಬದಿಯ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ.
ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲಾಧಾರಿ ಚರಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.