DAKSHINA KANNADA
ಕಡಬ – ಕೆಎಸ್ಆರ್ ಟಿಸಿ ಬಸ್ ಗೆ ತಿವಿದ ಕಾಡಾನೆ

ಕಡಬ ಜೂ.02. ಕಡಬದ ಪರಿಸರದಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
