ನೆಟ್ಟಣದಲ್ಲಿ ಕಾಡಾನೆಗಳ ಹಾವಳಿ, ಗ್ರಾಮಸ್ಥರಲ್ಲಿ ಕುಳಿತಿದೆ ಭಯದ ಚಳಿ

ಕಳೆದ ಕೆಲವು ದಿನಗಳಿಂದ ನಾಡಿನಿಂದ ದೂರ ಉಳಿದಿದ್ದ ಕಾಡಾನೆಯು ಮತ್ತೆ ನಾಡಿಗೆ ಲಗ್ಗೆ ಇಟ್ಟಿದ್ದು, ನೆಟ್ಟಣ, ಬಿಳಿನೆಲೆ ಪರಿಸರ ನಿವಾಸಿಗಳು ಭಯಭೀತರಾಗಿದ್ದಾರೆ.

ನೆಟ್ಟಣ ಪೇಟೆಯಲ್ಲಿನ ಅಬ್ದುಲ್ ರಹಿಮಾನ್ ಹಾಜಿ ಎಂಬವರ ಮನೆಯ ಪಕ್ಕದ ತೋಟದ ಬೇಲಿಯನ್ನು ಧ್ವಂಸಗೊಳಿಸಿರುವ ಕಾಡಾನೆಯು ತೆಂಗಿನ ಮರವನ್ನು ಹಾನಿಗೆಡವಿದೆ.

ಇನ್ನೊಂದೆಡೆ ಬಿಳಿನೆಲೆಯಲ್ಲಿಯೂ ಕಾಡಾನೆಯ ಪುಂಡಾಟ ಜೋರಾಗಿದೆ.

ಮನೆಯೊಂದರ ತಡೆಗೋಡೆಯನ್ನೇ ಪುಡಿಗಟ್ಟಿದೆ.

ಬಿಳಿನೆಲೆ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳಿದ್ದು, ಶುಕ್ರವಾರ ರಾತ್ರಿ ವೇಳೆಗೆ ಪೋಷಕರೋರ್ವರು ಶಾಲೆಗೆ ತೆರಳಿ ಹಿಂತಿರುಗುತ್ತಿದ್ದಾಗ ಕಾಡಾನೆ ಅಟ್ಟಿಸಿಕೊಂಡು ಹೋಗಿದೆ ಎನ್ನಲಾಗಿದೆ.

ಜನನಿಬಿಡ ಪ್ರದೇಶಕ್ಕೂ ಕಾಡಾನೆ ಲಗ್ಗೆ ಇಟ್ಟಿರುವುದು ಪರಿಸರದ ಜನರ ಆತಂಕಕ್ಕೆ ಕಾರಣವಾಗಿದೆ.

Facebook Comments

comments