Connect with us

  KARNATAKA

  ‘ಕರ್ನಾಟಕದ ಬಿಜೆಪಿಯನ್ನು ಶುದ್ಧೀಕರಣ ಮಾಡುವವರೆಗೆ ವಿರಮಿಸಲ್ಲ’; ಡಿವಿ ಸದಾನಂದ ಗೌಡ ಗುಡುಗು..!

  ಬೆಂಗಳೂರು : ಕೇಂದ್ರದಲ್ಲಿ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಆದ್ರೆ ಕರ್ನಾಟಕದ ಬಿಜೆಪಿಯನ್ನು ಶುದ್ಧೀಕರಣ ಮಾಡುವವರೆಗೆ ವಿರಮಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದ ಗೌಡ ಗುಡುಗಿದ್ದಾರೆ.


  ಮಾಧ್ಯಮಗಳೊಂದಿಗೆ  ಮಾತನಾಡಿದ ಗೌಡರು ರಾಜ್ಯದಲ್ಲಿ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ತನಗೆ, ತನ್ನ ಮನೆಯವರಿಗೆ, ತನ್ನ ಚೇಲಾಗಳಿಗೆ ಅಂತಾಗಿದೆ ಇದು ಆಗಬಾರದು. ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ. ಪಕ್ಷಕ್ಕೆ ಜೀವ ತೇಯ್ದವರನ್ನು ಕಡೆಗಣಿಸಬಾರದು ನನ್ನ ಎಲ್ಲಾ ಮಾತುಗಳೂ ಕರ್ನಾಟಕ ಬಿಜೆಪಿಗೆ ಸೀಮಿತವಾಗಿದೆ. ನಾನೊಬ್ಬ ಕನ್ನಡಿಗನಾಗಿ ಮಾತಾಡುತ್ತಿದ್ದೇನೆ. ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ ಎಂದು ಗುಡುಗಿದ್ದಾರೆ.
  ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ರಾಜ್ಯದಲ್ಲಿ ಬಿಜೆಪಿ ಜನರು ಒಪ್ಪಿಕೊಳ್ಳುವ ಪಕ್ಷ ಆಗಬೇಕು. ಮೋದಿ ಹೇಳಿದ ಬಿಜೆಪಿ ಕರ್ನಾಟಕದಲ್ಲಿ ಇರಬೇಕು. ಮೋದಿ ಹೇಳಿದ ಪರಿವಾರ ವಾದ ರಹಿತ, ಜಾತಿವಾದ ರಹಿತ ಭ್ರಷ್ಟಾಚಾರ ರಹಿತವಾದ ಪಕ್ಷ ರಾಜ್ಯದಲ್ಲಿ ಇರಬೇಕು. ಇದನ್ನು ಶುದ್ದೀಕರಣಕ್ಕೆ ನಿರಂತರವಾದ ಹೋರಾಟ ನಾನು ಮಾಡುತ್ತೇನೆ. ಶುದ್ದೀಕರಣವಾಗಬೇಕು ಎಂಬ ಮಾನಸಿಕತೆ ಇರುವ ಒಂದಷ್ಟು ಜನ ಪಕ್ಷದಲ್ಲಿ ಇದ್ದಾರೆ. ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ಪಕ್ಷ ನನ್ನ ಮಕ್ಕಳಿಗೆ, ಮನೆಯವರಿಗೆ, ಜಾತಿಯವರಿಗೆ ಚೇಲಾಗಳಿಗೆ ಅಂತಾ ಅವರು ತಿಳಿದುಕೊಂಡಿದ್ದಾರೆ. ಕರ್ನಾಟಕದಲ್ಲಿ ಮನೆಯವರಿಗೆ, ಜಾತಿಯವರಿಗೆ ಪಕ್ಷ ಆಗಬಾರದು ಎಂದರು. ನನಗೆ ಬಿಜೆಪಿ ಟಿಕೆಟ್​​ ತಪ್ಪಿದ್ದಕ್ಕೆ ನನಗೆ ನೋವಾಗಿದೆ. ನನಗೆ ಕಾಂಗ್ರೆಸ್​ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಸದಾನಂದಗೌಡ ಹೇಳಿದರು. ಪಕ್ಷ ಶುದ್ಧೀಕರಣ ನನ್ನ ಮುಖ್ಯ ಉದ್ದೇಶ. ಮುಂದಿನ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ. ಮುಂದಿನ ನಡೆ ಏನು ಎಂದು ಹಲವರು ಕೇಳಿದ್ದಾರೆ. ನನ್ನ ಮುಂದಿನ ನಡೆ ಪಕ್ಷ ಶುದ್ಧೀಕರಣ. ಬಿಜೆಪಿ ತೊರೆಯುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು

  Share Information
  Advertisement
  Click to comment

  You must be logged in to post a comment Login

  Leave a Reply