LATEST NEWS
ಪತ್ರಿಕಾಗೋಷ್ಠಿ ಕರೆದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದರೆ ಪ್ರಕರಣ ಕೈಬಿಡಲಾಗುವುದು -ತಮಿಳುನಾಡು ಸರಕಾರ
ಚೆನ್ನೈ ಅಗಸ್ಟ್ 08: ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟ ಪ್ರಕರಣದಲ್ಲಿ ಬಾಂಬ್ ಇರಿಸಿದ ಆರೋಪಿಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಹೇಳಿಕೆ ನೀಡಿದ್ದ ಪ್ರಕರಣ ದಾಖಲಾಗಿ ಸಂಕಷ್ಟದಲ್ಲಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ತಮಿಳುನಾಡು ಸರಕಾರ ಪತ್ರಿಕಾಗೋಷ್ಠಿಯಲ್ಲಿ ಕ್ಷಮೆಯಾಚಿಸಿದರೆ ಅವರ ವಿರುದ್ಧದ ಪ್ರಕರಣ ಕೈಬಿಡಲಾಗುವುದು ಎಂದು ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಶೋಭಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ತಮಿಳುನಾಜು ಅಡ್ವೋಕೇಟ್ ಜನರಲ್ ಪಿ ಎಸ್ ರಾಮನ್ ಅವರು ನ್ಯಾಯಾಲಯಕ್ಕೆ ಸರ್ಕಾರ ನಿರೀಕ್ಷಿಸುತ್ತಿರುವ ಕ್ಷಮಾಪಣೆಯ ಕರಡು ಸ್ವರೂಪವನ್ನು ತಿಳಿಸಿದರು.
ಈ ವೇಳೆ ಶೋಭಾ ಪರ ವಕೀಲರು ಟ್ವೀಟರ್ ನಲ್ಲಿ ಕ್ಷಮೆ ಕೇಳಿದ್ದಾರೆ ಎಂದು ಹೇಳಿದರು. ಅದಕ್ಕೆ ನ್ಯಾಯಾಲಯ ಒಪ್ಪಲಿಲ್ಲ. ಅಲ್ಲದೆ ನ್ಯಾಯಮೂರ್ತಿಗಳು ಕೂಡ ನಾನು ಎಕ್ಸ್ ಖಾತೆ ಹೊಂದಿಲ್ಲ ಎಂದರು. ಸಾರ್ವಜನಿಕ ವ್ಯಕ್ತಿಗಳು ಹೇಳಿಕೆಗಳನ್ನು ನೀಡುವಾಗ ಹೆಚ್ಚು ಜಾಗೃತರಾಗಿರಬೇಕು ಎಂದು ಇದೇ ವೇಳೆ ಅವರು ಕಿವಿಮಾತು ಹೇಳಿದರು.
You must be logged in to post a comment Login