Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಗಸ್ಟ್ 1 ರವರೆಗೆ ಮದ್ಯದಂಗಡಿ ಬಂದ್ …!!

ಮಂಗಳೂರು ಜುಲೈ 29: ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಉದ್ವಿಗ್ವಗೊಂಡಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಜುಲೈ 29 ರಿಂದ ಅಗಸ್ಟ್ 1 ರವರೆಗೆ ಜಿಲ್ಲೆಯ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.


ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಜಿಲ್ಲೆಯಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಂಡಿದ್ದು, ಈ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಜಿಲ್ಲೆಯಾದ್ಯಂತ ಆಗಸ್ಟ್‌ 1ರ ಬೆಳಗ್ಗೆ 8 ಗಂಟೆಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ.

ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ/ದಾಸ್ತಾನು, ಸಾಗಾಣಿಕೆಯನ್ನು ಮಾಡುವಂತಿಲ್ಲ. ಬಾರ್‍, ವೈನ್ ಶಾಪ್ ಸೇರಿದಂತೆ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಮುಚ್ಚಬೇಕು. ಆದೇಶವನ್ನು ಅಬಕಾರಿ ಇಲಾಖೆಯ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕೆಂದು ಅವರು ಸೂಚನೆ ನೀಡಿದ್ದಾರೆ.

Advertisement
Click to comment

You must be logged in to post a comment Login

Leave a Reply