BELTHANGADI
ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನ ಗುರುತು ಬಹಿರಂಗ – ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರಿಂದ ತನಿಖೆ

ಬೆಳ್ತಂಗಡಿ ಜುಲೈ 14: ಧರ್ಮಸ್ಥಳ ಗ್ರಾಮದಲ್ಲಿ ನೂರಕ್ಕೂ ಅಧಿಕ ಶವಗಳನ್ನು ಹೂತುಹಾಕಿರುವ ಬಗ್ಗೆ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕಾರ ಈಗಾಗಲೇ ತನಿಖೆ ಪ್ರಾರಂಭವಾಗಿದೆ. ಈ ನಡುವೆ ಸಾಕ್ಷಿ ರಕ್ಷಣಾ ಕಾಯ್ದೆಯಡಿ ಇರುವ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.
ಪ್ರಕರಣದ ಸಾಕ್ಷಿ ದೂರುದಾರನ ಗುರುತನ್ನು ಸಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ಇನ್ನೊಂದು ವಿಚಾರಣೆಯನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜು.13ರಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
