Connect with us

    DAKSHINA KANNADA

    ಸುಳ್ಯದ ಯುವತಿಗೆ ಸುಳ್ಳು ಭರವಸೆ, ಏರ್ ಲೈನ್ ನಲ್ಲಿ ಉದ್ಯೋಗದ ಅಮಿಷ ನೀಡಿ 13 ಲಕ್ಷದ ಪಂಗನಾಮ..!

    ವಿಮಾನ ಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಅಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಳಕಿಗೆ ಬಂದಿದೆ.
    ಸುಳ್ಯ: ವಿಮಾನ ಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಅಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಳಕಿಗೆ ಬಂದಿದೆ.

    ಇದೀಗ ವಿಮಾನದಲ್ಲಿ ಹಾರುವ ಕನಸು ಕಂಡಿದ್ದ ಯುವತಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿಯಾಗಿರುವ ಯುವತಿಗೆ ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದಾನೆ.

    ತಾನು ವಿಸ್ತಾರ ಏರ್ ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದಾನೆ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದಾರೆ.

    ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ.

    ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಯುವತಿ ಪಾವತಿಸಿದ್ದಾಳೆ, ಬಳಿಕ ತಾನು ಮೋಸ ಹೋಗಿದ್ದೇನೆಂದು ಅರಿತು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply