LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ – ಸಿಡಿಲಿಗೆ ಮಹಿಳೆ ಬಲಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ – ಸಿಡಿಲಿಗೆ ಮಹಿಳೆ ಬಲಿ
ಮಂಗಳೂರು ಅಕ್ಟೋಬರ್ 17: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನದಿಂದ ಸುರಿಯುತ್ತಿರುವ ಗುಡುಗು ಸಿಡಿಲು ಸಹಿತ ಮಳೆಗೆ ಮೂಡಬಿದಿರೆಯಲ್ಲಿ ಮಹಿಳೆಯೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.
ಮೂಡಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಬಳಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಅಪ್ಪಿ ಶೆಡ್ತಿ (85) ಎಂದು ಗುರುತಿಸಲಾಗಿದ್ದು, ಕರಿಂಜೆಯ ನಾಗಬನದ ಹತ್ತಿರ ನಡೆದುಕೊಂಡು ಹೊಗುತ್ತಿರುವ ಸಂದರ್ಭ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದು ಮಧ್ಯಾಹ್ನದಿಂದ ಸಿಡಿಲು ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಮಂಗಳೂರು, ಬೆಳ್ತಂಗ಼ಿ, ಪುತ್ತೂರು , ಸುಳ್ಯ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮಳೆಗಾಲದ ಮಳೆಯನ್ನು ನೆನಪಿಸುವ ರೀತಿಯಲ್ಲಿ ಮಳೆಯಾಗುತ್ತಿದೆ.