LATEST NEWS
ಗನ್ ಜೊತೆ ಸೆಲ್ಪಿ ತೆಗೆದುಕೊಳ್ಳುವಾಗ ಹಾರಿದ ಗುಂಡು – ಮಹಿಳೆ ಸಾವು

ಲಕ್ನೋ ಜುಲೈ 24: ಬಂದೂಕಿನೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭ ಅಕಸ್ಮಿಕವಾಗಿ ಗುಂಡು ಹಾರಿ ಮಹಿಳೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಮಾವನ ಸಿಂಗಲ್ ಬ್ಯಾರೆಲ್ ಬಂದೂಕಿನೊಂದಿಗೆ ಮಹಿಳೆ ಸೆಲ್ಫಿ ಕ್ಲಿಕ್ಕಿಸುವಾಗ ಈ ದುರಂತ ಸಂಭವಿಸಿದೆ.
ಮೃತರನ್ನು ರಾಧಿಕಾ ಎಂದು ಗುರುತಿಸಲಾಗಿದ್ದು, ಇವರಿಗೆ ಎರಡು ತಿಂಗಳ ಹಿಂದೆಯಷ್ಟೇ ಆಕಾಶ್ ಗುಪ್ತಾ ಜೊತೆ ವಿವಾಹವಾಗಿತ್ತು ಎಂದು ಮಹಿಳೆಯ ಮಾವ ರಾಜೇಶ್ ಗುಪ್ತಾ ಪೊಲೀಸರಿಗೆ ತಿಳಿಸಿದ್ದಾರೆ. ಬಂದೂಕು ಹಾಗೂ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಗುಂಡು ಹಾರುವ ಮುನ್ನ ತೆಗೆದುಕೊಂಡಿದ್ದ ಸೆಲ್ಫಿ ಆ ಫೋನ್‌ನಲ್ಲಿ ಸಿಕ್ಕಿದೆ.

ಇನ್ನು ತಮ್ಮ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಪೋಷಕರು ದೂರು ನೀಡಿದ್ದಾರೆ. ಇದು ಕೊಲೆಯೆಂದು ಪೊಲೀಸರಿಗೆ ದೂರು ನೀಡಿದ್ದಾರೆ.