Connect with us

KARNATAKA

ಮದುವೆಯಾಗಿ ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡ್ತಿಯನ್ನು ಪ್ರಿಯಕರನೊಂದಿಗೆ ಮುಗಿಸಿದ ಗಂಡ..!

ಬೆಳಗಾವಿ : ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ ಮಾಡುವ ವೇಳೆ ಬಿಡಿಸಲು ಬಂದಿದ್ದ ತಾಯಿ ಅಮಿನಾಬಾಯಿ ಬಾಗೂಡ ಹಾಗೂ ಮಾವ ಮುಸ್ತಫಾ ಮುಲ್ಲಾನ ಮೇಲು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಈ ಇಬ್ಬರನ್ನು ಮಿರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಬಲ್ ಮರ್ಡರ್ ಮಾಡಿದ ಆರೋಪಿ ತೌಫಿಕ್ ಸ್ಥಳದಿಂದ ಪರಾರಿ ಆಗಿದ್ದಾನೆ.
ತೌಫಿಕ್ ಹಾಗೂ ಹೀನಾ ಕೌಸರ್‌ಳಿಗೆ ಕಳೆದ 4 ತಿಂಗಳ ಹಿಂದೆ ಮದುವೆಯಾಗಿತ್ತು. ಮದುವೆಯಾಗಿ ಕೇವಲ 1 ತಿಂಗಳಿಗೆ ಹೆಂಡತಿ ಹೀನಾ ಕೌಸರ್ ಆಕೆಯ ಹಳೆ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ. ಇದಾದ ಬಳಿಕ ಪುನಃ ಅವರನ್ನು ಮನೆಯವರು ಹುಡುಕಿ ಸಮಾಜದ ಮುಖಂಡರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದರು. ಈ ವೇಳೆ ತಾನು ತೌಫಿಕ್‌ ಜೊತೆಗೆ ಸಂಸಾರ ಮಾಡುವುದಕ್ಕೆ ಇಷ್ಟವಿಲ್ಲ, ಯಾಸೀನ್‌ನೇ ಬೇಕು ಎಂದು ಹೀನಾ ಹಠ ಮಾಡಿದ್ದಾಳೆ. ಆಗ ಗ್ರಾಮಸ್ಥರೆಲ್ಲರೂ ಸೇರಿ ತೌಫಿಕ್‌ ಜೊತೆಗಿನ ವಿವಾಹವನ್ನು ಮುರಿದು ಯಾಸಿನ್ ಬಾಗೊಡೆ ಜೊತೆಗೆ ಹಿರಿಯರೆಲ್ಲರು ಸೇರಿ ಮದುವೆ ಮಾಡಿಸಿದ್ದರು.
ಜೀವನದಲ್ಲಿ ಹೇಗೆಲ್ಲಾ ಇರಬೇಕು ಎಂದು ಕನಸು ಕಟ್ಟಿಕೊಂಡು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಮದುವೆಯಾದ ಹೆಂಡತಿ ಕೇವಲ ಒಂದು ತಿಂಗಳಿಗೆ ಬೇರೊಬ್ಬನ ಜೊತೆಗೆ ಮದುವೆಯಾಗಿ ಸಂಸಾರ ಮಾಡುತ್ತಿದ್ದಾಳೆ. ಇದನ್ನು ಕಂಡು ಸಹಿಸಿಕೊಳ್ಳಲಾಗದ ತೌಫಿಕ್‌ ತನ್ನ ಮಾಜಿ ಪತ್ನಿ ಹಾಗೂ ಆಕೆಯ ಹಾಲಿ ಗಂಡನನ್ನು ಹುಡುಕಿ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇನ್ನು ಇಬ್ಬರನ್ನು ಕೊಲೆ ಮಾಡಿದ ಬಳಿಕ ತಾನು ನೇರವಾಗಿ ಪೊಲೀಸ್ ಠಾಣೆಗೆ ಹೋಗುವುದಾಗಿ ಹೇಳಿದ ತೌಫಿಕ್ ಅಲ್ಲಿಂದ ಪರಾರಿ ಆಗಿದ್ದಾನೆ.
ಡಬಲ್ ಮರ್ಡರ್ ನಡೆದ ಸ್ಥಳಕ್ಕೆ ಐಗಳಿ ಠಾಣೆ ಪೊಲೀಸರು ಬಂದು ಪರಿಶೀಲನೆ ಮಾಡಿದ್ದಾರೆ. ಈಗ ಆರೋಪಿ ತೌಫಿಕ್‌ನ ಪತ್ತೆಗಾಗಿ ಪೊಲೀಸರು ಎರಡೂ ತಂಡಗಳಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *