DAKSHINA KANNADA
ಪುತ್ತೂರು – ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಪುತ್ತೂರು ಜೂನ್ 14: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿರುವ ಸಂದರ್ಭ ಸಾಂಬಾರ್ ಪಾತ್ರೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ
ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಟಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಮೇ.30ರಂದು ಮಧ್ಯಾಹ್ನ 12ಗಂಟೆಯ ಸುಮಾರಿಗೆ ಶಾಲೆಯ ಅಡುಗೆ ಕೋಣೆಯಲ್ಲಿ ಸಾಂಬಾರು ಮಾಡುತ್ತಿದ್ದ ಸಂದರ್ಭ ಪಾತ್ರೆಗೆ ಕಾಲು ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
