Connect with us

LATEST NEWS

ಮಹಿಳೆಯರು ಸ್ವ-ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ – ಉಡುಪಿ ಜಿಲ್ಲಾ ಪಂಚಾಯತ್ ಸಿ.ಇ.ಓ ಪ್ರಸನ್ನ ಹೆಚ್

ಉಡುಪಿ, ಜುಲೈ 25 : ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳುವಂತಹ ತರಬೇತಿಯನ್ನು ನೀಡುವುದರೊಂದಿಗೆ ಅವರುಗಳು ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಭಿಗಳಾಗುವAತೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಕರೆ ನೀಡಿದರು.


ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯ ಮಹಿಳೆಯರು ಇವುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ಫಲಾನುಭವಿಗಳಾಗಿ ಆರ್ಥಿಕವಾಗಿ ಸಬಲರಾಗಬೇಕು ಎಂದರು. ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕ ಹಾಗೂ ಮಾರಾಟ ನಿಷೇಧ ಕಾಯ್ದೆಗಳನ್ನು ಅನುಷ್ಠಾನಗೊಳಿಸಲು ಗ್ರಾಮ ಪಂಚಾಯತಿ
ಮಟ್ಟದ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯಚಟುವಟಿಕೆಗಳನ್ನು ಮಾಡುವುದರೊಂದಿಗೆ ಯಾವುದೇ ಪ್ರಕರಣಗಳು ಆಗದಂತೆ ಎಚ್ಚರ ವಹಿಸಬೇಕು ಎಂದರು.

ಶಿಶು ಪಾಲನಾ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವುದರೊಂದಿಗೆ ಅಲ್ಲಿ ಮಕ್ಕಳ ಪಾಲನೆ ಉತ್ತಮವಾಗಿರಬೇಕು ಎಂದ ಅವರು, ಪಾಲನಾ ಕೇಂದ್ರಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಸ್ತಿçà ಶಕ್ತಿ ಭವನಗಳು ಮಹಿಳೆಯರ ಚಟುವಟಿಕೆಗೆ ಪೂರಕವಾಗಿ ಇರಬೇಕು. ಮಹಿಳೆಯರ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸ್ತಿçà ಶಕ್ತಿ ಭವನದಲ್ಲಿ ನಡೆಸಲು ಅನುಮತಿ ಮಾಡಿಕೊಡಬೇಕು ಎಂದ ಅವರು, ಸ್ತಿçà ಶಕ್ತಿ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 4 ವರದಕ್ಷಿಣೆ ಪ್ರಕರಣಗಳಾಗಿವೆ. ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಸಾಂತ್ವಾನ ಕೇಂದ್ರಗಳಿಗೆ ಸಮಸ್ಯೆಯನ್ನು ಹೊತ್ತು ತಂದ ಮಹಿಳೆಯರಿಗೆ ಸಮಾಲೋಚನೆಗಳನ್ನು ನಡೆಸುವುದರ ಮೂಲಕ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥ ಮಾಡಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *