ಕ್ವಾರಂಟೈನಲ್ಲಿದ್ದ ವಿವಾಹಿತ ಮಹಿಳೆ ಹಳೆ ಪ್ರಿಯಕರನ ಜೊತೆ ಪರಾರಿ

ಕಾರ್ಕಳ ಮೇ.21 : ಹೋಂ ಕ್ವಾರಂಟೈನ್‌ ಮುಗಿಯುತ್ತಿದ್ದಂತೆ ವಿವಾಹಿತೆಯೊಬ್ಬರು ತನ್ನ ಮಗು ಬಿಟ್ಟು ವಿವಾಹಿತ ಪ್ರಿಯಕರನ ಜೊತೆ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ.

ಅಜೆಕಾರು ಕೈಕಂಬ ನಿವಾಸಿ ಮುಬೀನಾ (28)‌ಎಂಬುವರು ಪರಾರಿಯಾದ ಮಹಿಳೆ. ಮಂಗಳೂರಿಗೆ ಮದುವೆಗೆ ಹೋದ ಕಾರಣಕ್ಕೆ ಈ ಮಹಿಳೆ ತಾಯಿ ಮತ್ತು ಸಹೋದರನ ಜೊತೆ ಹೋಂ ಕ್ವಾರಂಟೈನ್ ಆಗಿದ್ದರು. ಹೋಂ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ತನ್ನ ಹಳೇ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ.

ನಾಪತ್ತೆಯಾದ ಮುಬೀನಾ 8 ವರ್ಷದ ಹಿಂದೆ ಉದ್ಯಾವರದ ಸಾಜಿದ್‌ ಎಂಬುವವನೊಂದಿಗೆ ಮದುವೆಯಾಗಿ ಪುಣೆಯ ಲೋನಾವಲದಲ್ಲಿ ನೆಲೆಸಿದ್ದರು. ಕಳೆದ 4 ತಿಂಗಳ ಹಿಂದೆ ಕೌಟುಂಬಿಕ ಸಮಸ್ಯೆಯಿಂದ 8 ವರ್ಷದ ಮಗಳೊಂದಿಗೆ ಊರಿಗೆ ಬಂದು ಹೆತ್ತವರೊಂದಿಗೆ ವಾಸವಾಗಿದ್ದರು.

ಬಳಿಕ‌ ಕೊರೋನಾ ವೈರಸ್ ಹಿನ್ನಲೆಯಲ್ಲಿ ‌ಲಾಕ್‌ಡೌನ್ ಘೋಷಣೆಯಾಗಿದ್ದು ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನಲ್ಲಿ ‌ನಡೆದ ವಿವಾಹ ‌ಕಾರ್ಯಕ್ರಮಕದಲ್ಲಿ ಭಾಗವಹಿಸಿ, ಮರಳಿ ಊರಿಗೆ ಬಂದಿದ್ದರು. ಮುಬಿನಾ ಕಾಣೆಯಾದ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಇದೀಗ ಮೊಬಿನಾ ಪತ್ತೆಯಾಗಿದ್ದಾಳೆ, ಆಕೆಯನ್ನು ಪೋಷಕರ ಜೊತೆಗೆ ಕಳುಹಿಸಲಾಗಿದೆ.