LATEST NEWS
ಉಳ್ಳಾಲ – ಕಾಲ್ ಸೆಂಟರ್ ಉದ್ಯೋಗಿ ಪ್ರೀತಿಕಾ ಪೂಜಾರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು…!!

ಉಳ್ಳಾಲ ಜುಲೈ 06: ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.
ಮೃತರನ್ನು ಪ್ರೀತಿಕಾ ಪೂಜಾರಿ(21) ಎಂದು ಗುರುತಿಸಲಾಗಿದೆ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಉದ್ಯೋಗ ಮಾಡುತ್ತಿದ್ದರು.

ಇಂದು ಅಪರಾಹ್ನ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಕೆಲಸದಿಂದ ಮರಳಿದ್ದ ಪ್ರೀತಿಕಾ ನೇಣಿಗೆ ಕೊರಳೊಡ್ಡಿದ್ದಾರೆ . ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.