Connect with us

    LATEST NEWS

    ಮಹಿಳೆ ಜಸ್ಟ್ ಮಿಸ್..ಕೂದಲೆಳೆ ಅಂತರದಲ್ಲಿ ಮಹಿಳೆ ಬಚಾವ್…ಗ್ರೇಟ್ ಡ್ರೈವರ್….!!

    ಮಂಗಳೂರು ಜೂನ್ 21: ಮಹಿಳೆಯೊಬ್ಬರು ರಸ್ತೆ ದಾಟುವ ವೇಳೆ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮಂಗಳವಾರ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ.


    ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ.ಈ ವೇಳೆ ಎದುರಿನಿಂದ ಬಸ್ ಬಂದಿದೆ.ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.
    ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.


    ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.ಚಾಲಕನ ಸಮಯಪ್ರಜ್ಞೆಗೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply