Connect with us

    LATEST NEWS

    ಗುಜ್ಜರಕೆರೆ – ನಾಲ್ಕೂವರೆ ತಿಂಗಳ ಮಗುವನ್ನು ಸಾಯಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

    ಮಂಗಳೂರು ಡಿಸೆಂಬರ್ 02: ನಾಲ್ಕೂವರೆ ತಿಂಗಳ ಹಸುಗೂಸು ಮಗುವನ್ನು ಸಾಯಿಸಿ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ಮೃತರನ್ನು ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23) ಎಂದು ಗುರುತಿಸಲಾಗಿದೆ. ಗುಜ್ಜರಕೆರೆಯ ಅಪಾರ್ಟ್ಮೆಂಟ್ ನ ಫ್ಲಾಟ್ ವೊಂದರಲ್ಲಿ ಈ ಪ್ರಕರಣ ವರದಿಯಾಗಿದೆ.


    ಫಾತಿಮಾ ರುಕಿಯಾ ಅವರು ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರನ್ನು ವಿವಾಹವಾಗಿದ್ದರು. 2023 ಜುಲೈ 7 ರಂದು ಹೆರಿಗೆಯಾಗಿತ್ತು. ಇವರಿಗೆ ಅಬ್ದುಲ್ಲಾ ಹೂದ್ ಎಂಬ ಸುಮಾರು 4 1/2 ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದು,ಫಾತಿಮಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ.


    ಮಾನಸಿಕವಾಗಿನೊಂದಿದ್ದ ಅವರಿಗೆ ಮಂಗಳೂರಿನಲ್ಲಿ ಮಾನಸಿಕ ಚಿಕಿತ್ಸೆ ನೀಡಲಾಗಿತ್ತು, ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್​ನ ಬೆಡ್ ರೂಮ್​ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್​ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ.  ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *