Connect with us

    BELTHANGADI

    ಬೆಳ್ತಂಗಡಿ – 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

    ಬೆಳ್ತಂಗಡಿ ಮಾರ್ಚ್ 27: ತಾಯಿಯೊಬ್ಬಳು ತನ್ನ 9 ತಿಂಗಳ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ.


    ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ ನವರ ಪುತ್ರಿ ರುಷಿಕಾ( 9 ತಿಂಗಳು) ನಾಪತ್ತೆಯಾದವರು. ಮಾರ್ಚ್ 22 ರಂದು ರಾತ್ರಿ ಜಯಶ್ರೀ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್‌ ನಲ್ಲಿ ಮಲಗಿದ್ದರು. ಮರುದಿನ ಬೆಳಿಗ್ಗೆ ವೆಂಕಪ್ಪಗೌಡರು ಎದ್ದು ನೋಡಿದಾಗ ಪತ್ನಿ ಹಾಗೂ 9 ತಿಂಗಳ ಮಗು ರುಷಿಕಾ ನಾಪತ್ತೆಯಾಗಿದ್ದರೆನ್ನಲಾಗಿದೆ.
    ಈ ಬಗ್ಗೆ ವೆಂಕಪ್ಪಗೌಡ ಕೊಟ್ಟ ದೂರಿನಂತೆ ಧರ್ಮಸ್ಥಳ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply