Connect with us

    LATEST NEWS

    ಚೆನ್ನೈ ಮಳೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಹೊತ್ತುಕೊಂಡು ರಕ್ಷಿಸಿದ ಇನ್ಸ್ ಪೆಕ್ಟರ್ ರಾಜೇಶ್ವರಿ

    ಚೆನ್ನೈ : ತಮಿಳುನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಲವರ ಜೀವವನ್ನೆ ಬಲಿ ತೆಗೆದುಕೊಂಡಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಈ ನಡುವೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಳೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಹೊತ್ತುಕೊಂಡು ರಕ್ಷಿಸಿದ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ಮಹಿಳಾ ಇನ್ಸ್ ಪೆಕ್ಟರ್ ಅವರನ್ನು ರಾಜೇಶ್ವರಿ ಎಂದು ಗುರುತಿಸಲಾಗಿದೆ. ಇವರು 28 ವರ್ಷದ ಯುವಕನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ನಡೆದಿದ್ದಾರೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
    ವೀಡಿಯೋದಲ್ಲಿ ಇನ್ಸ್ ಪೆಕ್ಟರ್ ಯುವಕನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ನಂತರ ಆಟೋದಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಎಲ್ಲಾ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲದೆ ಅದನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿ ಶಹಬ್ಬಾಸ್ ಗಿರಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply