LATEST NEWS
ಉಡುಪಿ – ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವತಿಯ ರಕ್ಷಣೆ

ಉಡುಪಿ ಎಪ್ರಿಲ್ 20 : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಯುವತಿಯೊಬ್ಬಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬೈಲೂರಿನ ಬಡಗು ಬೆಟ್ಟು ಎಂಬಲ್ಲಿ ನಡೆದಿದೆ.
ಮನೆಯ ಸಮೀಪ ಮರದಲ್ಲಿ ಪೇರಳೆ ಹಣ್ಣು ತೆಗೆಯಲು ಮರದ ಮೇಲೇರಿದಾಗ ಯುವತಿ ಕಾಲು ಜಾರಿ ಬಾವಿಗೆ ಬಿದ್ದು ಅವಘಡ ಸಂಭವಿಸಿದೆ. ಈ ಘಟನೆ ನಿನ್ನೆ ಸಂಜೆ 6 ಗಂಟೆಯ ವೇಳೆಗೆ ನಡೆದಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೂಡಲೇ ಜಾಗೃತರಾಗಿ ಬಾವಿಗೆ ಬಿದ್ದ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಯುವತಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
