Connect with us

    DAKSHINA KANNADA

    ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿದ ತಾಯಿ ಸಾವು..ಅದೃಷ್ಟವಶಾತ್ ಬದುಕುಳಿದ ಮಗಳು

    ಸುಳ್ಯ ಜೂನ್ 29: ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ಮಗಳು ಅದೃಷ್ಟವಶಾತ್ ಬದುಕುಳಿದಿದ್ದಾರೆ.


    ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ತನ್ನ 4 ವರ್ಷದ ಮಗಳು ಪೂರ್ವಿಕಾಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಮುಂಜಾನೆ ಮನೆಯವರು ಎದ್ದಾಗ ದಯಾನಂದರವರ ಪತ್ನಿ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ‍ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿರುವುದಾಗಿ ತಿಳಿದು ಬಂದಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *