ಉಪ್ಪಿನಂಗಡಿಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಪುತ್ತೂರು ಮಾರ್ಚ್ 19: ನೇಣು ಬಿಗಿದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ 48 ವರ್ಷ ವಯಸ್ಸಿನ ಉಮಾವತಿ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಸಮೀಪದ ನೆಕ್ಕಾಲ್ಲಾಡಿಯಲ್ಲಿ ಈ ಘಟನೆ ನಡೆದಿದೆ. ಮಕ್ಕಳಿಲ್ಲ ಎನ್ನುವ ಕೊರಗಿನಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Facebook Comments

comments