Connect with us

    LATEST NEWS

    ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ – ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರೆಸ್ಟ್

    ಮಂಗಳೂರು ಅಕ್ಟೋಬರ್ 14 : ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೇದರಿಕೆಯೊಡ್ಡಿದ ಆರೋಪದ ಮೇಲೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ.


    ಸಂತ್ರಸ್ಥ ಯುವತಿಯ ಪಾಂಡೇಶ್ವರದ ಜಿಲ್ಲಾ ಅಲ್ಪಸಂಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕೆಲಸಕ್ಕಿದ್ದಳು. ಆಕೆಯನ್ನು ಲೈಂಗಿಕ ಕಿರುಕುಳ ನೀಡಲು ಯತ್ನಿಸಿ, ವಾಟ್ಸಪ್ ನಲ್ಲಿ ನಗ್ನ ಚಿತ್ರಗಳನ್ನು ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯ ಪಡಿಸುತ್ತಿದ್ದ ಎಂದು ದೂರಲಾಗಿದ್ದು, ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.

    ಆನಂತರ, ಕೆಲಸವನ್ನೇ ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಅಧಿಕಾರಿ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ದೂರಿನ ಆಧಾರದಲ್ಲಿ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *