Connect with us

    LATEST NEWS

    ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ: ನ್ಯಾ.ಶರ್ಮಿಳಾ

    ಉಡುಪಿ, ಫೆಬ್ರವರಿ 10 : ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜಿಲ್ಲೆಯ ಎಲ್ಲಾ ಸ್ಕಾö್ಯನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ
    ನೀಡಿ, ಪರಿಶೀಲಿಸುವ ಬಗ್ಗೆ ಶೀಘ್ರದಲ್ಲಿ ಆದೇಶ ಬರುವ ಸಾಧ್ಯತೆಗಳಿದ್ದು, ಕಾಯಿದೆಯ ಅಂಶಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುವವರಿಗೆ ಕಾರಾಗೃಹ ವಾಸ ಮತ್ತು ದಂಡದ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು.


    ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ವೈದ್ಯಕೀಯ ಅಧಿಕಾರಿಗಳಿಗೆ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಗರ್ಭದಲ್ಲಿನ ಮಗುವಿನ ಆರೋಗ್ಯಕರ ಬೆಳವಣಿಗೆ ಮತ್ತು ಯಾವುದೇ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ತಿಳಿದು ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲು ಮಾತ್ರ ಭ್ರೂಣ ಪತ್ತೆಗೆ ಕಾನೂನಿನಲ್ಲಿ ಅವಕಾಶವಿದ್ದು, ಇದಕ್ಕೆ ನಿಗಧಿತ ನಮೂನೆಯಲ್ಲಿ ಪೋಷಕರ ಲಿಖಿತ ಒಪ್ಪಿಗೆ ಪತ್ರದ ಅಗತ್ಯವಿದ್ದು, ಇದನ್ನು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಉಲ್ಲಂಘಿಸಿ, ಕಾನೂನನ್ನು ದುರ್ಬಳಕೆ ಮಾಡಿಕೊಂಡಲ್ಲಿ ಮೊದಲ ಬಾರಿಗೆ 3 ವರ್ಷ ಜೈಲು ಮತ್ತು 10000 ರೂ. ದಂಡ ಹಾಗೂ ಇದು ಪುನರಾವರ್ತನೆಯಾದಲ್ಲಿ 5 ವರ್ಷ ಜೈಲು ಹಾಗೂ 50000 ರೂ. ವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.

    ಇತ್ತೀಚೆಗೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತಮಗೆ ಹೆಣ್ಣು ಮಕ್ಕಳು ಜನಿಸಲಿ ಎಂದು ಆಸೆ ಪಡುವ ಪೋಷಕರ ಸಂಖ್ಯೆಯೂ ಅಧಿಕವಾಗಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಸಮಾಜದಲ್ಲಿ ಮಹಿಳೆ ಮತ್ತು ಪುರುಷರ ಲಿಂಗಾನುಪಾತ ಸಮಾನವಾಗಿರಲು ಇದರಿಂದ ಸಾಧ್ಯವಾಗಲಿದೆ ಎಂದರು. ಇದೇ ಸಂದರ್ಭದಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಮಾಹಿತಿ ನೀಡುವ ಕರಪತ್ರ ಬಿಡುಗಡೆ ಮಾಡಲಾಯಿತು.

     

    Share Information
    Advertisement
    Click to comment

    Leave a Reply

    Your email address will not be published. Required fields are marked *