Connect with us

    LATEST NEWS

    ಕುಸ್ತಿಯನ್ನು ತ್ಯಜಿಸುತ್ತೇನೆ…..ಕಣ್ಣೀರು ಹಾಕಿದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್

    ನವದೆಹಲಿ ಡಿಸೆಂಬರ್ 21: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬೆಂಬಲಿತ ಅಭ್ಯರ್ಥಿ ಸಂಜಯ್ ಸಿಂಗ್ (Sanjay Singh) ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಕುಸ್ತಿಯನ್ನು ತೊರೆಯುವುದಾಗಿ ಒಲಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಘೋಷಣೆ ಮಾಡಿದ್ದಾರೆ.


    ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿದ ಖ್ಯಾತನಾಮ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌‌, ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುಣಿಯಾ ಮಹಿಳಾ ಕುಸ್ತಿಪಟುಗಳು ಸುದ್ದಿಗೋಷ್ಠಿಯನ್ನು ನಡೆಸಿದ್ದು, ನಾವು ನಮ್ಮ ಹೃದಯದಿಂದ ಈ ಯುದ್ಧವನ್ನು ಮಾಡಿದ್ದೇವೆ. ಕೊನೆಯಲ್ಲಿ, ನಾವು 40 ದಿನಗಳ ಕಾಲ ರಸ್ತೆಗಳಲ್ಲಿ ಮಲಗಿದ್ದೆವು ಆದರೆ ಈ ವರ್ಷದ ಆರಂಭದಲ್ಲಿ ನಡೆದ ಪ್ರತಿಭಟನೆಗಳ ಸಮಯದಲ್ಲಿ ನಮ್ಮನ್ನು ಬೆಂಬಲಿಸಲು ಬಂದ ನಮ್ಮ ದೇಶದ ಹಲವಾರು ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ.
    ಬ್ರಿಜ್ ಭೂಷಣ್ ಸಿಂಗ್ ಅವರ ವ್ಯಾಪಾರ ಪಾಲುದಾರರು ಮತ್ತು ಆಪ್ತ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾದರೆ, ನಾನು ಕುಸ್ತಿಯನ್ನು ತ್ಯಜಿಸುತ್ತೇನೆ…” ಎಂದು ಮಲಿಕ್ ಅವರು ಗುರುವಾರ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದ ಎದುರು ಕಣ್ಣೀರು ಹಾಕಿದರು.

    ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಮತ್ತು ಆಪ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವಾಲಯವು ಕುಸ್ತಿಪಟುಗಳಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಉತ್ತರ ಪ್ರದೇಶ ಕುಸ್ತಿ ಫೆಡರೇಶನ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜಯ್ ಸಿಂಗ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಲಗೈ ಬಂಟರಾಗಿದ್ದರು ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *