Connect with us

LATEST NEWS

ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ವೈ ಶ್ರೇಣಿ ಭದ್ರತೆ

ಉಡುಪಿ ಜನವರಿ 01: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಭದ್ರತೆ ಒದಗಿಸಲಾಗಿದೆ .


ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ . ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಹಿನ್ನಲೆ ಸರಕಾರ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ವೈ ಶ್ರೇಣಿ ಭದ್ರತೆಯನ್ನು ನೀಡಿದೆ.