Connect with us

LATEST NEWS

ಎಡನೀರು ಮಠದ ನಿಯೋಜಿತ ಉತ್ತರಾಧಿಕಾರಿ ಯತಿ ಶ್ರೀ  ಸಚ್ಚಿದಾನಂದ ಭಾರತೀ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ ಸೆಪ್ಟೆಂಬರ್ 28: ಕಾಸರಗೋಡು ಎಡನೀರು ಮಠದ ನಿಯೋಜಿತ ಉತ್ತರಾಧಿಕಾರಿ ಯತಿ ಶ್ರೀ  ಸಚ್ಚಿದಾನಂದ ಭಾರತೀ ಸ್ವಾಮೀಜಿ ಇತ್ತೀಚೆಗೆ ಶ್ರೀ ಕ್ಷೆತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ಸೇವೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

 

ಬಳಿಕ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆನಡೆಸಿದರು. ಕ್ಷೇತ್ರದ ಪರವಾಗಿ ಡಾ. ಹೆಗ್ಗಡೆಯವರು  ಅವರಿಗೆ ಗೌರವಾರ್ಪಣೆ ಸಲ್ಲಿಸಿದರು.


ಎಡನೀರು ಮಠದ ನಿಯೋಜಿತ ಯತಿಗಳನ್ನು ಕ್ಷೇತ್ರದ ಸಕಲ ಗೌರವಗಳೊಂದಿಗೆ ಬರಮಾಡಿಕೊಳ್ಳಲಾಯ್ತು. ಧರ್ಮಾಧಿಕಾರಿಗಳ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಪಾರುಪತ್ತೇದಾರ ಲಕ್ಸ್ಮಿನಾರಾಯಣ ರಾವ್, ಸೀತಾರಾಮ ತೋಳ್ಪಡಿತ್ತಾಯ ಸ್ವಾಗತಿಸಿದರು. ಕುಂಟಾರು ರವೀಶ್ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಉಜಿರೆಯ ಅರಿಪ್ಪಾಡಿ ಮಠಕ್ಕೆ ಭೇಟಿ ನೀಡಿ  ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದರು. ಬಾಲಕೃಷ್ಣ ಅರಿಪ್ಪಾಡಿತ್ತಾಯ ರು ಅವರನ್ನು ಭಕ್ತಿಪೂರ್ವಕ ಸ್ವಾಗತಿಸಿ ಗೌರವಿಸಿದರು.

Facebook Comments

comments