Connect with us

KARNATAKA

ಯಾದಗಿರಿ ಭೀಕರ ರಸ್ತೆ ಅಪಘಾತ – ಆರು ತಿಂಗಳ ಮಗು ಸೇರಿದಂತೆ 6 ಮಂದಿ ದಾರುಣ ಸಾವು

ಯಾದಗಿರಿ ಅಗಸ್ಟ್ 05: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ.


ನಿನ್ನೆ ರಾತ್ರಿ 10.30ರ ಸುಮಾರಿಗೆ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಐವರು ಹಾಗೂ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಮಹ್ಮದ್ ವಾಜೀದ್ ಹುಸೇನ್ (39), ಮಹಮ್ಮದ್ ಮಜರ್ ಹುಸೇನ್ (79), ನೂರ್ ಜಹಾನ್ ಬೇಗಂ (70), ಹೀನಾ ಬೇಗಂ (30), ಇಮ್ರಾನ್ (22), ಉಮೇಜಾ(6 ತಿಂಗಳ ಮಗು) ಎಂದು ಗುರುತಿಸಲಾಗಿದೆ.

Advertisement
Click to comment

You must be logged in to post a comment Login

Leave a Reply