DAKSHINA KANNADA
ಯಕ್ಷಗಾನ ಕಲಾವಿದನಿಗೆ ಉಚಿತ ಮನೆ ನಿರ್ಮಿಸಿದ ಯಕ್ಷಧ್ರುವ ಪಟ್ಲ ಫೌಂಢೇಶನ್..!
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರ ಮಾಡಿದೆ .
ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅಳಿಕೆ ಹಾಗೂ ಪದಾಧಿಕಾರಿಗಳಾದ ಅರವಿಂದ ರೈ ಮೂರ್ಜೆಬೆಟ್ಟು ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.
ಮನೆಯವರ ವತಿಯಿಂದ ಮನೆ ನಿರ್ಮಾತೃ ಅಶೋಕ್ ಶೆಟ್ಟಿ ಬೆಳ್ಳಾಡಿಯವರಿಗೆ ಹಾಗೂ ವಿಟ್ಲ ಘಟಕದ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಗೌರವ ಸಮರ್ಪಿಸಿದರು.
ನಂತರ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ವತಿಯಿಂದ ರೂಪೇಶ್ ಆಚಾರ್ಯ ಅವರ ಮನೆಯವರನ್ನು ಗೌರವಿಸಲಾಯಿತು.
ಬಡವರ ಕಣ್ಣೀರೊರಸಲು ಸಹಕರಿಸಿದ ಅಶೋಕ್ ಶೆಟ್ಟಿ ಬೆಳ್ಳಾಡಿ ಹಾಗೂ ಶ್ಯಾಮಲಾ ಅಶೋಕ್ ಶೆಟ್ಟಿ ಯವರಿಗೆ ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ಕೃತಜ್ಞತೆ ಸಲ್ಲಿಸಿದೆ.
You must be logged in to post a comment Login