Connect with us

    DAKSHINA KANNADA

    ಅಮೇರಿಕದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಿಗ್ವಿಜಯ..! ಪಟ್ಲಗೆ ವಿಶಿಷ್ಟ ಗೌರವ ಸಲ್ಲಿಸಿದ ಬ್ರೂಕ್ಫೀಲ್ಡ್ ಮೇಯರ್..!

    ಮಂಗಳೂರು:  ಗಲ್ಫ್  ರಾಷ್ಟ್ರಗಳಲ್ಲಿ ತನ್ನ ಯಕ್ಷಗಾನ ಕಲೆಯ ಮೂಲಕ ತನ್ನ ಛಾಪು ಮೂಡಿಸಿದ್ದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಮೇರಿಕ ಮುಟ್ಟಿದೆ.

    ಅಮೇರಿಕದಲ್ಲಿ  ಯಕ್ಷಗಾನ ಕಲೆಯ ದಿಗ್ವಿಜಯ ಆರಂಭಿಸಿರುವ ಪಟ್ಲ ತಂಡವನ್ನು ಅಲ್ಲಿನ ಜನ ಪ್ರತಿನಿಧಿಗಳು ಹಾಡಿ ಹೊಗಳಿದ್ದಾರೆ.  ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇತ್ತೀಚೆಗಷ್ಟೇ ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್ ಜುಲೈ 27 ನೇ ತಾರೀಕನ್ನು ಯಕ್ಷದ್ರುವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿತ್ತು. ಇದೀಗ ಇದರ ಬೆನ್ನಲ್ಲೇ  ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದಲ್ಲಿ ನಡೆದ ಯಕ್ಷಗಾನ ಕಲೆಯನ್ನು ಹಾಗೂ ಪಟ್ಲ ಫೌಂಡೇಶನ್ ಕೈಗೊಂಡಿರುವ ಮಹಾನ್ ಕಾರ್ಯವನ್ನು ಶ್ಲಾಘಿಸಿ ಅಲ್ಲಿಯ ಮೇಯರ್ ಸ್ಟೀವನ್ ವಿ ಪೋಂಟೋ ಅವರು ಕೂಡ ಆಗಸ್ಟ್ 18ನೇ ತಾರೀಖು ಬ್ರೂಕ್ಫೀಲ್ಡ್ ನಗರದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ಈ ಸಾಧನೆಯಲ್ಲಿ ನಿರ್ಣಾಯಕ ಬೆಂಬಲ ನೀಡಿದ ಮಿಲ್ವಾಕೀ ಕನ್ನಡ ಸಂಘಕ್ಕೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು  ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply