LATEST NEWS
ಪ್ರತಿಭಾನ್ವಿತ ಯಕ್ಷಗಾನ ಕಲಾವಿದ ಜಗದೀಶ್ ನಲ್ಕ ಅಸೌಖ್ಯದಿಂದ ನಿಧನ
ಮಂಗಳೂರು ಎಪ್ರಿಲ್ 07 : ಅಸೌಖ್ಯದಿಂದ ತೆಂಕುತಿಟ್ಟಿನ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದ ಜಗದೀಶ ನಲ್ಕ (46) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕಳೆದ 21 ವರ್ಷಗಳಿಂದ ಸಸಿಹಿತ್ಲು ಮೇಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಗದೀಶ್ ನಲ್ಕ ಅವರು ಭಗವತಿ ಮಹಾತ್ಮೆಯಲ್ಲಿ ಈಶ್ವರನ ಪಾತ್ರ, ದೇವಿಮಹಾತ್ಮೆಯಲ್ಲಿ ವಿಷ್ಣು, ರಕ್ತಬೀಜಾಸುರನ ಪಾತ್ರಗಳನ್ನು ಸೊಗಸಾಗಿ ನಿರ್ವಹಿಸುತ್ತಿದ್ದರು. ಅವರು ಪತ್ನಿ, ಪುತ್ರಿ, ಪುಟ್ಟ ಗಂಡು ಮಗುವನ್ನು ಅಗಲಿದ್ದಾರೆ.
You must be logged in to post a comment Login