Connect with us

DAKSHINA KANNADA

ಯಕ್ಷಗಾನರಂಗದ ಹಾಸ್ಯಬ್ರಹ್ಮ ಪೆರುವೋಡಿ ನಾರಾಯಣ ಭಟ್ ಇನ್ನಿಲ್ಲ

ಪುತ್ತೂರು ಅಕ್ಟೋಬರ್ 31 : ಯಕ್ಷಗಾನ ರಂಗದ ಹಾಸ್ಯಬ್ರಹ್ಮ ಎಂದೇ ಖ್ಯಾತವಾಗಿದ್ದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವೋಡಿ ನಾರಾಯಣ ಭಟ್ (96) ಆಸ್ಪತ್ರೆಯಲ್ಲಿ ನಿಧನರಾದರು. ಬಂಟ್ವಾಳ ತಾಲೂಕಿನ ಪದ್ಯಾಣದಲ್ಲಿ 1927 ರಲ್ಲಿ ಜನಿಸಿದ ಪೆರುವೋಡಿ ಪ್ರಸಿದ್ಧ ಧರ್ಮಸ್ಥಳ ಮೇಳಕ್ಕೆ ಸೇರಿ ಹಲವಾರು ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ.


ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದ ನಾರಾಯಣ ಭಟ್ ಅವರು ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ, ಮಾನ್ಯತೆ ತಂದು ಕೊಟ್ಟಿದ್ದಾರೆ. ‘ಪಾಪಣ್ಣ ವಿಜಯ’ ಪ್ರಸಂಗದ ಪಾಪಣ್ಣ ಪಾತ್ರದ ವಿನ್ಯಾಸ ಹಾಗೂ ಪಾತ್ರಾಭಿವ್ಯಕ್ತಿಯ ಮೂಲಕ ತಮ್ಮ ಕಲ್ಪನಾಶಕ್ತಿಯನ್ನು ಪ್ರದರ್ಶಿಸಿ ಜನಮನ್ನಣೆ ಗಳಿಸಿದ್ದಾರೆ. ಆರನೇ ತರಗತಿಯವರೆಗೆ ವಿದ್ಯಾಬ್ಯಾಸ ಮಾಡಿದ್ದ ಅವರು ಎಂಟನೇ ವರ್ಷದಲ್ಲೇ ತಾಳಮದ್ದಳೆಗಳಲ್ಲಿ ಭಾಗವಹಿಸಲು ಪ್ರಾರಂಭಿಸಿದ್ದರು. 14ನೇ ವರ್ಷದಲ್ಲೇ ಧರ್ಮಸ್ಥಳ ಮೇಳದಲ್ಲಿ ಮೊದಲ ತಿರುಗಾಟವನ್ನು ನಡೆಸಿದ್ದರು. ಯಕ್ಷಗಾನ ರಂಗದಲ್ಲಿ ಮಾಡಿದ ಸಾಧನೆಗಾಗಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ದಮಯಂತಿ ಪುನರ್ ಸ್ವಯಂವರ ಪ್ರಸಂಗದ ಬಾಹುಕ ಪಾತ್ರಕ್ಕೆ ಹೊಸ ರೂಪ ನೀಡಿದ್ದಾರೆ. ಪೌರಾಣಿಕ ಪ್ರಸಂಗದ ಬಹುತೇಕ ಎಲ್ಲಾ ಪಾತ್ರಗಳಲ್ಲೂ ಸ್ವಂತಿಕೆಯ ಮೇಲ್ಮೆ ಅವರದಾಗಿದ್ದು, ತುಳು ಪ್ರಸಂಗಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply