Connect with us

    LATEST NEWS

    ಹಿರಿಯ ಯಕ್ಷಗಾನ ಕಲಾವಿದ ಮಲ್ವೆ ವಾಸುದೇವ ಸಾಮಗ ಇನ್ನಿಲ್ಲ

    ಉಡುಪಿ ನವೆಂಬರ್ 7: ಯಕ್ಷಗಾನ ರಂಗದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.


    ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿರುವ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು, ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ ಅವರು ಕೋಟ ಶ್ರೀಧರ ಹಂದೆಯವರ ಒತ್ತಾಸೆಯ ಮೇರೆಗೆ ಪ್ರಥಮ ಬಾರಿಗೆ ದೊಡ್ಡ ಕೂಟದಲ್ಲಿ ಅರ್ಥದಾರಿಯಾಗಿ ಗಮನ ಸೆಳೆದು ಅವರದ್ದೇ ಯಜಮಾನಿಕೆಯ ಅಮೃತೇಶ್ವರಿ ಮೇಳದಲ್ಲಿ ವೃತ್ತಿರಂಗಕ್ಕೆ ಕಾಲಿಟ್ಟರು. ಯಕ್ಷಲೋಕ ವಿಜಯ ಪ್ರಸಂಗದ ಪ್ರದೀಪನ ಪಾತ್ರ ಅವರಿಗೆ ಅಪಾರ ಜನಮನ್ನಣೆ ಗಳಿಸಿಕೊಟ್ಟಿತು.


    ಧರ್ಮಸ್ಥಳ, ಕದ್ರಿ, ಕರ್ನಾಟಕ ಸುರತ್ಕಲ್‌ ಮೇಳ ಬಳಿಕ ಕಾಳಿಂಗ ನಾವಡರ ಪ್ರಸಿದ್ಧಿಯ ಕಾಲದಲ್ಲಿ ಸಾಲಿಗ್ರಾಮ ಮೇಳ ಸೇರಿದ ಅವರ ಭಾನುತೇಜಸ್ವಿ ಪ್ರಸಂಗದ ಭಾನುತೇಜಸ್ವಿ, ಚೈತ್ರಪಲ್ಲವಿಯ ಪಾತ್ರಗಳು ಪ್ರಸಿದ್ಧಿ ಪಡೆದವು. ನಾಗಶ್ರೀ ಪ್ರಸಂಗ ಶುಬ್ರಾಂಗನ ಪಾತ್ರಕ್ಕೆ ಶಿರಿಯಾರ ಮಂಜು ನಾಯ್ಕರ ನಂತರ ಹೊಸ ರೂಪವನ್ನು ನೀಡಿದ ಇವರು, ಯಕ್ಷಗಾನದಲ್ಲಿ ಪ್ರಥಮ ಬಾರಿಗೆ ಕೋರ್ಟು ಸನ್ನಿವೇಷವನ್ನು ಸೃಷ್ಟಿಸಿ ಹೊಸ ದಾಖಲೆ ಮೂಡಿಸಿದರು. ಪೆರ್ಡೂರು ಮೇಳದಲ್ಲು ಹೊಸ ಪ್ರಸಂಗಗಳಲ್ಲಿ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ಮತ್ತು ಇವರ ಜೋಡಿವೇಷಗಳು ಮಾತಿನ ಚಕಮಕಿಯಿಂದ ಹೊಸ ಹೊಸ ಪ್ರೇಕ್ಷಕರನ್ನು ಯಕ್ಷಗಾನದತ್ತ ಸೆಳೆದಿತ್ತು

    Share Information
    Advertisement
    Click to comment

    Leave a Reply

    Your email address will not be published. Required fields are marked *