ಕೆಜಿಎಫ್ ಚಿತ್ರ ಯಶಸ್ಸಿಗಾಗಿ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್

ಮಂಗಳೂರು ಡಿಸೆಂಬರ್ 16: ಬಹುನಿರೀಕ್ಷಿತ ಕೆ.ಜಿ.ಎಫ್. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ಇಂದು ಮಧ್ಯಾಹ್ನ ಧರ್ಮಸ್ಥಳದ ಶ್ರೀ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಪ್ರಶಾಂತ್ ನೀಲ್ ನಿರ್ದೇಶಿಸಿರುವ ಸಿನಿಮಾದಲ್ಲಿ ಯಶ್ ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು.ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಹಾಗೂ ಉತ್ತರ ಭಾರತದಲ್ಲಿ ಈ ಸಿನೆಮಾ ರಿಲೀಸ್ ಆಗಲಿದೆ.

ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್​ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರೆ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕೆಜಿ‌ಎಫ್ ಚಿತ್ರಕ್ಕೆ ಯಶಸ್ಸು ಸಿಗಲೆಂದು ವಿಶೇಷ ಪೂಜೆ ಮಾಡಿದ್ದು, ಇಂದು ಬೆಳಗ್ಗೆ ಉಡುಪಿಯ ಕೊಲ್ಲೂರು ಮೂಕಾಂಬಿಕೆಗೂ ವಿಶೇಷ ಪೂಜೆ ಸಲ್ಲಿಸಿದ್ದರು.

4 Shares

Facebook Comments

comments