LATEST NEWS
ಮಂಗಳೂರಿನ ಬೆಡಗಿ ಯಶಸ್ವಿನಿ ದೇವಾಡಿಗ ಮುಡಿಗೆ ‘ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್’ 2023 ಪ್ರಶಸ್ತಿ..!
ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಮೀಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಅಂತಿಮ ಸುತ್ತಿನಲ್ಲಿ ಮಂಗಳೂರಿನ ಬೆಡಗಿ ಯಶಸ್ವಿನಿ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಂಗಳೂರು ಸೆಪ್ಟೆಂಬರ್ 26: ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಮೀಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಅಂತಿಮ ಸುತ್ತಿನಲ್ಲಿ ಮಂಗಳೂರಿನ ಬೆಡಗಿ ಯಶಸ್ವಿನಿ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್‌ನ್ಯಾಶನಲ್ 2023 ಹದಿಹರೆಯದವರಿಗೆ ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಾಗಿದೆ. ವರ್ಷದ ಆರಂಭದಲ್ಲಿ ನಡೆದ ಮಿಸ್ ಟೀನ್ ಇಂಡಿಯಾ ಗ್ಲೋಬ್ ಬ್ಯೂಟಿ ಕಾಂಟೆಸ್ಟ್ ನಲ್ಲಿ ಸ್ಪರ್ಧಿಸಿ ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದರು.
ಥಾಯ್ಲೆಂಡ್ ನಲ್ಲಿ ನಡೆದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದ ಮಂಗಳೂರು ಮೂಲದ ಬೆಡಗಿ ಯಶಸ್ವಿನಿ ದೇವಾಡಿಗ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿರುವ ಯಶಸ್ವಿನಿ ದೇವಾಡಿಗ ದೇವದಾಸ ದೇವಾಡಿಗ – ಮೀನಾಕ್ಷಿ ದೇವಾಡಿಗ ದಂಪತಿಯ ಪುತ್ರಿ.
ಇವರು ಸುರತ್ಕಲ್ ಗೋವಿಂದದಾಸ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.
ಚಿಕ್ಕಂದಿನಿಂದಲೂ ಮಂಗಳೂರಿನ ಚೆಲುವೆ ಐಶ್ವರ್ಯ ರೈ ಸೇರಿದಂತೆ ಮಾಡೆಲಿಂಗ್ನಲ್ಲಿ ಸಾಧನೆ ಮಾಡಿದವರನ್ನು ಬೆರಗುಗಣ್ಣಿನಿಂದ ನೋಡುತ್ತಿದ್ದ ಯಶಸ್ವಿನಿ ದೇವಾಡಿಗ ಯಾವತ್ತೂ ಈ ಫೀಲ್ಡ್ಗೆ ಬಂದವರಲ್ಲ.
ಆದರೆ, ಪ್ರಥಮ ಪಿಯುಸಿ ಮುಗಿದು ರಜೆಯ ಸಂದರ್ಭದಲ್ಲಿ ಮಿಸ್ ಟೀನ್ ಮಂಗಳೂರು ಸ್ಪರ್ಧೆಯ ವಿವರ ನೋಡಿದ ಅವರು ಆ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.
ಆ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಫ್ ಆಗಿ ಕಿರೀಟ ಮುಡಿಗೇರಿಸಿಕೊಂಡಿದ್ದರು.
ಬಳಿಕ ಹೈದರಾಬಾದ್ನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕಿರೀಟ ಮುಡಿಗೇರಿಸಿದ್ದರು.
ಅಲ್ಲಿಂದ ವಿಶ್ವ ಮಟ್ಟಕ್ಕೆ ಆಯ್ಕೆಯಾಗಿ ಮಿಸ್ಟರ್ ಮತ್ತು ಮಿಸ್ ಟೀನ್ ಸೂಪರ್ ಗ್ಲೋಬ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಭಾಗಿಯಾಗಿ ಕಿರೀಟ ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯ 15 ರಿಂದ 19 ವರ್ಷದೊಳಗಿನ ಕೆಟಗರಿಯಲ್ಲಿ ಅವರು ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸ್ಪರ್ಧೆಗೆ 15ಕ್ಕೂ ಅಧಿಕ ದೇಶಗಳಿಂದ 50ಕ್ಕೂ ಅಧಿಕ ಸ್ಪರ್ಧಿಗಳು ಸ್ಪರ್ಧಾರ್ಥಿಗಳಿದ್ದರು.
ನಾಲ್ಕು ದಿನಗಳಲ್ಲಿ ಈ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಎಲ್ಲಾ ಸ್ಪರ್ಧಿಗಳು ಅವರವರ ದೇಶದ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಪ್ರದರ್ಶಿಸಿದ್ದರು.
ಜೊತೆಗೆ ಸಾಂಪ್ರದಾಯಿಕ ಆಹಾರವನ್ನು ಪ್ರದರ್ಶಿಸಬೇಕಿತ್ತು. ಜೊತೆಗೆ ತಮ್ಮಲ್ಲಿರುವ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಬೇಕಿತ್ತು.
ನಾಲ್ಕನೇ ದಿನ ಫೈನಲ್ ಹಂತದ ಸ್ಪರ್ಧೆ ನಡೆದಿತ್ತು.ಅಂತಿಮ ಸುತ್ತಿನಲ್ಲಿ ಪ್ರಥಮ ಸ್ಥಾನ ಪಡೆದ ಯಶಸ್ವಿನಿ ದೇವಾಡಿಗ ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ನ್ಯಾಷನಲ್ -2023 ಕಿರೀಟವನ್ನು ಮುಡಿಗೇರಿಸಿದ್ದಾರೆ.