Connect with us

KARNATAKA

ಮತ್ತೆ ಸ್ವಪಕ್ಷದ ವಿರುದ್ದ ಸಿಡಿದೆದ್ದ ಯತ್ನಾಳ್ ; ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ..!

ಬೆಳಗಾವಿ: ಇದೀಗ ಮತ್ತೊಮ್ಮೆ ಸ್ವ ಪಕ್ಷ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತಿರುಗಿ ಬಿದ್ದಿದ್ದು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ್ದಾರೆ.

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು. ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು. , ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *