Connect with us

    LATEST NEWS

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಎಡೆ ಮಡೆಸ್ನಾನ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಎಡೆ ಮಡೆಸ್ನಾನ

    ಪುತ್ತೂರು ಡಿಸೆಂಬರ್ 11: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಟಿ ಮಹೋತ್ಸವ ಆರಂಭಗೊಂಡಿದೆ. ಇಂದಿನಿಂದ ಮೂರು ದಿನಗಳ ಕಾಲ ಕ್ಷೇತ್ರದಲ್ಲಿ ಭಕ್ತಾಧಿಗಳು ಗ ಎಡೆ ಮಡೆಸ್ನಾನ ಸೇವೆ ನೆರವೇರಿಸಲಿದ್ದಾರೆ.

    ಚೌತಿ, ಪಂಚಮಿ ಹಾಗೂ ಷಷ್ಟಿ ದಿನದಂದು ಸೇವೆ ನೆರವೇರಲಿದ್ದು, ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಸೇವೆಯನ್ನು ನೆರವೇರಿಸಲಿದ್ದಾರೆ. ಕ್ಷೇತ್ರದಲ್ಲಿ ಅನಾದಿ‌ ಕಾಲದಿಂದ ನಡೆದುಕೊಂಡು ಬರುತ್ತಿದ್ದಂತಹ ಬ್ರಾಹ್ಮಣರು ತಿಂದು ಉಳಿಸಿದಂತಹ ಎಲೆಯ ಮೇಲೆ ಭಕ್ತಾಧಿಗಳು ಈ‌ ಸೇವೆಯನ್ನು ನೆರವೇರಿಸುತ್ತಿದ್ದರು‌.

    ಈ ಸೇವೆಗೆ ಇತ್ತೀಚಿನ ಕೆಲವು ವರ್ಷಗಳಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಪದ್ದತಿಯನ್ನು ನಿಶೇಧಗೊಳಿಸಿ ಆದೇಶ ಹೊರಡಿಸಿದ ಬಳಿಕ ಕ್ಷೇತ್ರದಲ್ಲಿ ದೇವರಿಗೆ ನೈವೇದ್ಯವಿಟ್ಟ ಅನ್ನವನ್ನು ದನಗಳಿಗೆ ತಿನ್ನಿಸಿದ ಬಳಿಕ ಆ ಎಲೆಯ ಮೇಲೆ ಭಕ್ತಾಧಿಗಳು ಉರುಳು‌ಸೇವೆ ಮಾಡುವ ಎಡೆಮಡೆಸ್ನಾನ ಪದ್ದತಿಯನ್ನು ಆರಂಭಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *