LATEST NEWS
ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷಕ್ಕೆ ಕೊಳೆತು ಹೋದ ಶವಾಗಾರದಲ್ಲಿಟ್ಟ ಶವ….!

ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷಕ್ಕೆ ಕೊಳೆತು ಹೋದ ಶವಾಗಾರದಲ್ಲಿಟ್ಟ ಶವ
ಮಂಗಳೂರು ಅಕ್ಟೋಬರ್ 27: ಆಸ್ಪತ್ರೆಯ ಶವಾಗಾರದಲ್ಲಿಟ್ಟ ಶವವನ್ನು ಸರಿಯಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಶವ ಸಂಪೂರ್ಣ ಕೊಳೆತು ಹೋದ ಘಟನೆ ಮಂಗಳೂರಿನ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ನಡೆದಿದೆ.
ಇತ್ತೀಚೆಗೆ ವಿದ್ಯುತ್ ಅಘಾತದಿಂದ ಮೃತಪಟ್ಟಿದ್ದ ತೊಕ್ಕೋಟು ನಿವಾಸಿ ವಿಲ್ಸನ್ ಫರ್ನಾಂಡೀಸ್ ಶವವನ್ನು ಅಂತ್ಯಕ್ರಿಯೆಗಾಗಿ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು.

ಆದರೆ ಆಸ್ಪತ್ರೆಯ ಸಿಬ್ಬಂದಿ ಶವವನ್ನು ಸರಿಯಾಗಿ ಇಡದ ಕಾರಣ ಇಂದು ವಿಲ್ಸನ್ ಸಂಬಂಧಿಕರು ಶವಕ್ಕಾಗಿ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಶವಾಗಾರದಲ್ಲಿಟ್ಟಿದ್ದ ಶವ ಸಂಪೂರ್ಣ ಕೊಳೆತು ನಾರಿದೆ. ಇದರಿಂದ ಬೇಸತ್ತ ಸಂಬಂಧಿಕರು ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆಯ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಆಸ್ಪತ್ರೆಯ ವಿರುದ್ದ ದೂರು ಬಂದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.