LATEST NEWS
ಯೋಗಕ್ಕೆ ವಿಶ್ವಮಾನ್ಯತೆ: ರಘುಪತಿ ಭಟ್
ಉಡುಪಿ; ಜನವರಿ 15: ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿರುವ ಭಾರತದ ಯೋಗ ಪದ್ದತಿಗೆ ವಿಶ್ವ ಮಾನ್ಯತೆ ದೊರೆತಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಅವರು ಇಂದು ಮಣಿಪಾಲದ ಎಂಡ್ ಪಾಯಿಂಟ್ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಯೋಗಥಾನ್ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿಶ್ವಸಂಸ್ಥೆಯು ಭಾರತದ ಯೋಗ ಪದ್ದತಿಯ ಮಹತ್ವವನ್ನು ಜಗತ್ತಿಗೆ ಸಾರಲು ಜೂನ್ 21 ರಂದು ವಿಶ್ವದಾದ್ಯಂತ ವಿಶ್ವ ಯೋಗ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡುವÀ ಮೂಲಕ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದೆ,
ನಿರಂತರವಾಗಿ ಯೋಗ ಅಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆಯಲು ಸಾಧ್ಯವಿದೆ, ಒತ್ತಡ ನಿವಾರಣೆಗೆ ಯೋಗ ಪರಿಹಾರ ನೀಡಲಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಒತ್ತಡ ಮುಕ್ತ ಮತ್ತು ಆರೋಗ್ಯಯುತ ಜೀವನ ನಡೆಸಲು ಸಾಧ್ಯ ಎಂದರು.