DAKSHINA KANNADA
ಅರಂತೋಡು- ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವ ವೈದ್ಯ ಚಿಕಿತ್ಸೆ ಫಲಕಾರಿಯಾಗದೇ ಸಾವು

ಅರಂತೋಡು ಜುಲೈ 05: ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಕೆಲ ದಿನಗಳ ಹಿಂದೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಮೃತರನ್ನು ಕಲ್ಲುಗುಂಡಿಯ ಯುವ ವೈದ್ಯ ಡಾ| ಶಮಂತ್ ಭಟ್ (25) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಸೋಣಂಗೇರಿ ಸಮೀಪ ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಶಮಂತ್ ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಯುವತಿಗೆ ಮಗು ಕರುಣಿಸಿ ನಾಪತ್ತೆಯಾಗಿದ್ದ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಅರೆಸ್ಟ್

ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಲು ತೀವ್ರವಾಗಿ ಜಖಂಗೊಂಡಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 4 ರಂದು ಸಾವನಪ್ಪಿದ್ದಾರೆ. ದುಗ್ಗಲಡ್ಕ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಆಸ್ಪತ್ರೆಯಿಂದ ಮನೆಗೆ ಹೋಗುವ ಸಂದರ್ಭ ಈ ಅಪಘಾತ ಸಂಭವಿಸಿತ್ತು.ಮಂಗಳೂರು – ಎಲೆಕ್ಟ್ರಿಕ್ ಆಟೋಗಳಿಗೆ ಪರ್ಮಿಟ್ ಕಡ್ಡಾಯ
1 Comment