LATEST NEWS
ಮೊದಲ ಮದುವೆ ವಾರ್ಷಿಕೋತ್ಸವದ ಬೆನ್ನಲ್ಲೆ ನೇಣಿಗೆ ಶರಣಾದ ಯುವ ವೈದ್ಯೆ…!!
ಕೇರಳ ಜೂನ್ 22: ಮದುವೆ ವಾರ್ಷಿಕೋತ್ಸವದ ಬೆನ್ನಲ್ಲೆ ಯುವ ವೈದ್ಯೆಯೊಬ್ಬಳು ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಕೇರಳ ಕೊಲ್ಲಂ ಜಿಲ್ಲೆಯ ಸಾಸ್ತಂಕೋಟಾ ಬಳಿಯ ಸಾಸ್ತಮ್ನಾಡ ಎಂಬಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ತನಗೆ ನೀಡಿದ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯನ್ನು ವಿಸ್ಮಯ.ವಿ.ನೈಯರ್ ಎಂದು ಗುರುತಿಸಲಾಗಿದೆ. ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಆ್ಯಂಡ್ ಸರ್ಜರಿ ವಿದ್ಯಾರ್ಥಿನಿಯಾಗಿದ್ದ ವಿಸ್ಮಯ 2020ರ ಮೇ ತಿಂಗಳಲ್ಲಿ ಆರ್ ಟಿಓ ಅಧಿಕಾರಿ ಎಸ್.ಕಿರಣ್‍ಕುಮಾರ್ ಎಂಬವರ ಜೊತೆ ವಿವಾಹವಾಗಿದ್ದರು. ದಂಪತಿ ಕೇರಳದ ಕೊಲ್ಲಂನಲ್ಲಿ ವಾಸವಿದ್ದರು.
ಆದರೆ ಮದುವನೆ ನಂತರ ಪತಿ ಕಿರಣ್ ಕುಮಾರ್ ವಿಸ್ಮಯ ಅವರಿಗೆ ವರದಕ್ಷಿಣೆ ವಿಚಾರದಲ್ಲಿ ಕಿರುಕುಳ ನೀಡುತ್ತಿದ್ದರು ಎಂದು ತನ್ನ ಸೋದರ ಸಂಬಂಧಿಯೊಬ್ಬರಿಗೆ ತಿಳಿಸಿದ್ದರು. ಅಲ್ಲದೆ ಹಲವು ಬಾರಿ ಹೊಡೆದಿದ್ದಾನೆ ಎಂದು ವಿವರಿಸಿದ್ದಾಳೆ.
ಸಾವಿಗೂ ಮುನ್ನನ ವಿಸ್ಮಯ ತನ್ನ ಸೋದರ ಸಂಬಂಧಿ ಜೊತೆ ನೋವನ್ನು ತೋಡಿಕೊಂಡಿದ್ದು, ಪತಿಯ ಚಿತ್ರ ಹಿಂಸೆಯನ್ನು ಸಹಿಸಲಾಗುತ್ತಿಲ್ಲ, ವರದಕ್ಷಿಣೆ ಬೇಕೆಂದು ನಿತ್ಯ ಹಿಂಸೆ ನಿಡುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಈ ಕುರಿತು ಭಾನುವಾರ ರಾತ್ರಿ ಸಹ ಸೋದರಸಂಬಂಧಿ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಕಿರುಕುಳ ಸಹಿಸಲಾಗುತ್ತಿಲ್ಲ. ಬಹುಶಃ ಇದೇ ಕೊನೆಯ ಮೆಸೇಜ್ ಆಗಬಹುದು ಎಂದು ಹೇಳಿಕೊಂಡಿದ್ದಳು. ಮರುದಿನ ಬೆಳಗ್ಗೆ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮಗಳ ಸಾವಿಗೆ ಆಕೆಯ ಪತಿಯೇ ಕಾರಣ, ಮದುವೆ ಸಮಯದಲ್ಲಿ ಒಂದು ಎಕರೆ ಭೂಮಿ, ಒಂದು ಕಾರನ್ನು ನೀಡಲಾಗಿದೆ. ಆದರೂ ಅಳಿಯನ ಹಣದಾಹ ಕಡಿಮೆಯಾಗಿರಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದು. ಇದೀಗ ಆರೋಪಿ ಕಿರಣ್ ಕುಮಾರ್‍ನನ್ನು ಬಂಧಿಸಲಾಗಿದೆ.