LATEST NEWS
ಕೊರೊನಾ ಅಲೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ಯುವಕ…!!

ಉಡುಪಿ ಎಪ್ರಿಲ್ 25: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಆತಂಕದಿಂದ ಮಾನಸಿಕವಾಗಿ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡೌನ್ ರಸ್ತೆ ನಿವಾಸಿ ಪ್ರಸನ್ನ ಡಿ ಅಲ್ಮೇಡ(26) ಎಂದು ಗುರುತಿಸಲಾಗಿದ್ದು, ಇವರು ಕೆಲ ಸಮಯಗಳ ಹಿಂದೆ ಮಾನಸಿಕ ಖಿನ್ನತೆಗೆ ಒಳಪಟ್ಟಿದ್ದು, ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಯುವಕನ ಅಣ್ಣ ಉದ್ಯೋಗದಲ್ಲಿರುವ ದೆಹಲಿಯಲ್ಲಿ ಕರೊನಾ ಹೆಚ್ಚುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಏಪ್ರಿಲ್ 23 ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
