ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ವಿಚಾರ ಕೊಲೆಯಲ್ಲಿ ಅಂತ್ಯ

ಮಂಗಳೂರು ನವೆಂಬರ್ 30: ಮಂಗಳೂರು ನಗರದ ಹೊರವಲಯದ ತೊಕ್ಕೂಟ್ಟು ಎಂಬಲ್ಲಿ ಯುವಕನ ಕೊಲೆ ನಡೆದಿದೆ. ಕೊಲೆಯಾದ ಯುವಕನನ್ನು ಕುಂಬ್ಳೆ ಪುತ್ತಿಗೆ ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ.

ತೊಕ್ಕೊಟ್ಟುವಿನ ಲಾಡ್ಜ್ ಒಂದರಲ್ಲಿ ಕೆಲಸ ಮಾಡುತ್ತಿರುವ ರಕ್ಷಿತ್ ಕೊಲೆ ಮಾಡಿರುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಕೊಲೆಯಾದ ಸುದರ್ಶನ್  ರಕ್ಷಿತ್ ಗೆ ಸಂಬಂಧಿಸಿದ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು ಈ ಹಿನ್ನಲೆಯಲ್ಲಿ ಇಬ್ಬರ ನಡುವೆ ಉಂಟಾದ ಮನಸ್ತಾಪದಿಂದ ಈ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಸುದರ್ಶನ್ ನನ್ನು ಬೇರೆ ಸ್ಥಳದಲ್ಲಿ ಕೊಲೆ ಮಾಡಿ ಬಳಿಕ ಇಲ್ಲಿ ತಂದು ಹಾಕಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸುದರ್ಶನ ಕೊಲೆಯಾದ ವಿಚಾರವನ್ನು ಸ್ವತಃ ರಕ್ಷಿತ್ ಪೊಲೀಸರಿಗೆ ತಿಳಿಸಿದ್ದು, ಸದ್ಯ ರಕ್ಷಿತ್ ಪರಾರಿಯಾಗಿದ್ದಾನೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.