DAKSHINA KANNADA
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕನನ್ನು ಬಲಿ ತಗೊಂಡ ಸಿಡಿಲು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕನನ್ನು ಬಲಿ ತಗೊಂಡ ಸಿಡಿಲು
ಪುತ್ತೂರು, ಫೆಬ್ರವರಿ 07 : ದಕ್ಷಿಣ ಕನ್ನಡ ಜಿಲ್ಲೆಯ ಒಳ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಅಕಾಲಿಕ ಮಳೆ ಸುರಿದಿದೆ.
ಅಪಾರ ನಷ್ಟದೊಂದಿಗೆ ಒಂದು ಜೀವ ಹಾನಿಯೂ ಸಂಭವಿಸಿದೆ. ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ಯುವಕನನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ವಿನ ಹರಿಹರ ನಿವಾಸಿ ಪ್ರವೀಣ್ (21) ಎಂಬವರಾಗಿದ್ದು, ಸುಬ್ರಹ್ಮಣ್ಯ ದ ಕುಮಾರಧಾರಾ ಸಮೀಪ ಕಟ್ಟಡವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಗಂಭೀರ ಗಾಯಗೊಂಡ ಪ್ರವೀಣ್ ನನ್ನು ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ. ಮೃತದೇಹದ ಅರ್ಧಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ.