Connect with us

    DAKSHINA KANNADA

    ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ

    ಮಂಗಳೂರು, ಫೆಬ್ರವರಿ 24: ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮಾಸುವ ಮುನ್ನವೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ.

    ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಈಕೆ ಕಳೆದ ಶುಕ್ರವಾರ ಬೆಳ್ಳಂಬೆಳಗ್ಗೆ ಕೇರಳ ರಾಜ್ಯದ ವರ್ಕಳದಿಂದ ರೈಲು ಪ್ರಯಾಣದ ಮೂಲಕ ಮಂಗಳೂರು ಕಡೆಗೆ ಆಗಮಿಸುತ್ತಿದ್ದರು. ನಸುಕಿನ ಜಾವ ಇದ್ದ ಕಾರಣ ಆಕೆ ರೈಲಿನಲ್ಲಿ ನಿದ್ರಿಸುತ್ತಿದ್ದಳು‌. ಈ ಸಂದರ್ಭ ಸಹ ಪ್ರಯಾಣಿಕನಾದ ಆರೋಪಿ‌ ಆಕೆಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ.

    ತಕ್ಷಣ ಆತನ ವಿಡಿಯೋ ಮಾಡಿದ ಯುವತಿ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಬಳಿಕ ಇದು ವೈರಲ್ ಆಗಿದ್ದು, ಅನೇಕರು ಯುವತಿಯ ಬೆಂಬಲಕ್ಕೆ ಬಂದಿದ್ದಾರೆ. ಅಲ್ಲದೆ ಈ ಬಗ್ಗೆ ಪೊಲೀಸ್ ದೂರು ಕೂಡಾ ನೀಡಲಾಗಿದ್ದು. ದೂರು ದಾಖಲಾದ ನಾಲ್ಕು ದಿನಗಳ ಬಳಿಕ ಆರೋಪಿ ಪೊಲೀಸರು ಬಂಧಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply