DAKSHINA KANNADA
ಟಿಕೆಟ್ ಬಂಡಾಯ ದಕ್ಷಿಣಕನ್ನಡ ಜಿಲ್ಲೆಯ ಯೂತ್ ಕಾಂಗ್ರೇಸ್ ಅಧ್ಯಕ್ಷ ಮತ್ತು ಪದಾಧಿಕಾರಿಗಳ ರಾಜೀನಾಮೆ
ಟಿಕೆಟ್ ಬಂಡಾಯ ದಕ್ಷಿಣಕನ್ನಡ ಜಿಲ್ಲೆಯ ಯೂತ್ ಕಾಂಗ್ರೇಸ್ ಅಧ್ಯಕ್ಷ ಮತ್ತು ಪದಾಧಿಕಾರಿಗಳ ರಾಜೀನಾಮೆ
ಮಂಗಳೂರು ಏಪ್ರಿಲ್ 17 : ಮುಲ್ಕಿ ಮೂಡಬಿದ್ರೆಯಲ್ಲಿ ಕಾಂಗ್ರೇಸ್ ಭಿನ್ನಮತ ಸ್ಪೋಟಗೊಂಡಿದೆ. ಕಾಂಗ್ರೆಸ್ ಭದ್ರ ಕೋಟೆಯಂತಿದ್ದ ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಬಂಡಾಯ ಸ್ಪೋಟಗೊಂಡಿದೆ. ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಶಾಸಕ ಅಭಯಚಂದ್ರ ಜೈನ್ ಅವರಿಗೆ ಟಿಕೆಟ್ ಸಿಕ್ಕಿರುವುದಕ್ಕೆ ಯುವ ಕಾಂಗ್ರೇಸ್ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.
ಮೂಡಬಿದ್ರೆ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಗೆ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಘಟಕ ಸಿಡಿದೆದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಯೂತ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಯುವಕರಿಗೆ ಅವಕಾಶ ನೀಡಲು ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಶಾಸಕ ಅಭಯಚಂದ್ರ ಜೈನ್ ಬಹಿರಂಗವಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಗೆ ಟಿಕೆಟ್ ನೀಡಿ ಎಂದು ಅಭಯಚಂದ್ರ ಜೈನ್ ವರ್ಷಗಳ ಹಿಂದೆ ಕಾಂಗ್ರೇಸ್ ಮುಖಂಡರಲ್ಲಿ ಮನವಿ ಮಾಡಿದ್ದರು. ಆದರೆ ಈಗ ಮತ್ತೆ ತಾನೆ ನಿಲ್ಲುವ ಮೂಲಕ ಈಗ ಮಾತು ತಪ್ಪಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಮಾತು ತಪ್ಪಿದ ಅಭಯಚಂದ್ರ ಜೈನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಯೂತ್ ಕಾಂಗ್ರೆಸ್ ನ 50 ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಮುಖಂಡರು ಹಾಗು ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.