DAKSHINA KANNADA
ಟೆರೇಸ್ ಮೇಲೆ ಮೊಬೈಲ್ ನಲ್ಲಿ ಸಂಭಾಷಣೆ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು

ಪುತ್ತೂರು ಡಿಸೆಂಬರ್ 24: ಮನೆಯ ಟೆರೇಸ್ ಮೇಲೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಜಾರಿ ಬಿದ್ದು ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಎಂದು ಗುರುತಿಸಲಾಗಿದೆ. ಕೇಪು ಬಳಿಯ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದ ಪ್ರಸಾದ್ ನಿನ್ನೆ ತಡರಾತ್ರಿ ಮನೆಯ ಟೆರೇಸ್ ನಲ್ಲಿ ಮೊಬೈಲ್ ನಲ್ಲಿ ಸಂಭಾಷಣೆಯಲ್ಲಿ ತೊಡಗಿದ್ದರು ಎಂದು ಹೇಳಲಾಗಿದ್ದು. ಈ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.