ಮಂಗಳೂರು,ಡಿಸೆಂಬರ್ 24):-ಧನರಾಜ್ (25) ಎಂಬವರು ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದು, ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದರು. ಡಿಸೆಂಬರ್ 19 ರಂದು ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋದವರು ಡಿಸೆಂಬರ್ 21 ರಂದು ನಾನು ಇನ್ನು ಮನೆಗೆ ಬರುವುದಿಲ್ಲ ಎಂದು ವಾಟ್ಸಾಪ್ ಮೆಸೇಜ್ ಮಾಡಿ ನಂತರ ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಈ ಬಗ್ಗೆ ಸುರತ್ಕಲ್ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಣೆಯಾದವರ ಚಹರೆ :ಎತ್ತರ: 5.0 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಪೂರ ಶರೀರ, ಕೋಲು ಮುಖ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ಕಪ್ಪು ಅರ್ಧ ತೋಳಿನ ಶರ್ಟ್, ಕಪ್ಪು ಬಣ್ಣದ ಟ್ರ್ಯಾಕ್ ಪ್ಯಾಂಟ್ ಧರಿಸಿದ್ದು ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಸುರತ್ಕಲ್ ಪೆÇೀಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share Information