LATEST NEWS
ಕಾಪು -ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಆದಿತ್ಯ
ಕಾಪು, ಡಿಸೆಂಬರ್ 15: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉದ್ಯಾವರ ಬೊಳ್ಜೆ ಎಂಬಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು. ಅಲ್ಲದೆ ಪೆರಂಪಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಇವರು ಭಾಗವಹಿಸಿದ್ದರು. ಅಲ್ಲಿಂದ ಮನೆಗೆ ಬಂದ ಆದಿತ್ಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.